ಕೇಂದ್ರದ ವಿರುದ್ಧ ಕೈ ಪಡೆ ಆಕ್ರೋಶ

ML PRATIBATANE 04
Published on

ಮೊಳಕಾಲ್ಮೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿದೆ. ಜಾತಿಗಳ ನಡುವೆ ಗೋಡೆ ಕಟ್ಟುವಂತಹ ಪ್ರಯತ್ನ ಮಾಡಲಾಗುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಳಿಕ ಸಿರಸ್ತೇದಾರರಿಗೆ ಮನವಿ ಪತ್ರ ಸಲ್ಲಿಸಿದರು. ಯೂತ್ ಘಟಕದ ತಾಲೂಕು ಅಧ್ಯಕ್ಷ ಡಾ.ಎನ್.ಕೆ.ದಾದಾಪೀರ್, ಕಾರ್ಯಾಧ್ಯಕ್ಷ ಜಿ.ಎನ್.ಜಗದೀಶ್, ಉಪಾಧ್ಯಕ್ಷ ಸಿ.ಒ.ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಬ್ಲಾಕ್ ಅಧ್ಯಕ್ಷ ಪಟೇಲ್ ಜಿ.ಪಾಪನಾಯಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net