ವ್ಯಾಪಾರದ ಸಮಯ ವಿಸ್ತರಣೆಗೆ ಮನವಿ

MLK MANAVI 08
Published on

ಮೊಳಕಾಲ್ಮೂರು: ಮೊಳಕಾಲ್ಮೂರಿನಲ್ಲಿ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಸಮಯ ವಿಸ್ತರಿಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಒತ್ತಾಯಿಸಿ ತಹಸೀಲ್ದಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕಠಿಣ ಕ್ರಮಕ್ಕೆ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಆದರೆ, ಪ್ರಸ್ತುತ ವ್ಯಾಪಾರ ವಹಿವಾಟಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಸಮಯ ನಿಗದಿ ಮಾಡಿರುವುದು ಸರಿಯಲ್ಲ. ಈ ಸಮಯವನ್ನು ವಿಸ್ತರಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಕನಕಶಿವಮೂರ್ತಿ, ಐಯ್ಯಣ್ಣ, ನಂಜಪ್ಪನಾಯಕ, ಜಿಂಕಾ ಶ್ರೀನಿವಾಸ, ವಿ.ಮಾರನಾಯಕ, ಎಚ್.ಎ.ಮಾರಣ್ಣ, ಪಾಪಣ್ಣ, ವಿನಯ್, ಮುನ್ನಾ, ಭೋರಯ್ಯ, ವೆಂಕಟೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net