ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

CRIMe download
Published on

ಮೊಳಕಾಲ್ಮೂರು: ಹೊಸ ವರ್ಷಾಚರಣೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹಾನಗಲ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಪಟ್ಟಣದ ನಿವಾಸಿ ಧರ್ಮೇಂದ್ರ (25) ಮೃತ ಯುವಕ. ಬೈಕ್ ಹಿಂಬದಿ ಕುಳಿತಿದ್ದ ದಿಲೀಪ್ ಗಂಭೀರ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾನಗಲ್ ಕಡೆಯಿಂದ ಮೊಳಕಾಲ್ಮೂರಿಗೆ ಬರುವಾಗ ದುರ್ಘಟನೆ ನಡೆದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net