ವಿವಿ ಸಾಗರದಿಂದ ನೀರು ಹರಿಸಿ

MLK manavi 29
Published on

ಮೊಳಕಾಲ್ಮೂರು: ಮೊಳಕಾಲ್ಮೂರಿಗೂ ವಿ.ವಿ.ಸಾಗರ ಜಲಾಶಯದಿಂದ ನೀರು ಹರಿಸಬೇಕು ಎಂದು ಒತ್ತಾಯಿಸಿ ನೀರಾವರಿ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು ತಾಲೂಕು ಆಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.

ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಸರ್ಕಾರವೇ ಘೋಷಣೆ ಮಾಡುತ್ತಿದೆ. ಸಂಕಷ್ಟದ ಜೀವನ ನಡೆಸುತ್ತಿರುವ ಜನ, ಜಾನುವಾರುಗಳ ಹಿತರಕ್ಷಣೆ ಮಾಡುವುದು ಸರ್ಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯ ಎಂದು ಹೇಳಿದರು.

ನೀರು ಹರಿಸುವ ವಿಚಾರದಲ್ಲಿ ತಾರತಮ್ಯ ಸಲ್ಲದು. ವಿವಿ ಸಾಗರ ಅಥವಾ ಭದ್ರಾ ಮೇಲ್ದಂಡೆ ಯೋಜನೆಯಡಿ ಸಮಗ್ರ ನೀರಾವರಿಗೆ ಬದ್ಧತೆ ತೋರದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ತುಂಗಾಭದ್ರ ಹಿನ್ನೀರು ಯೋಜನೆಯಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು ಸಿಗಲಿದೆ. ಆದರೆ, ಇದನ್ನು ತಪ್ಪಿಸಲು ಕೆಲವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಬೆಳಗಲ್ ಈಶ್ವರಯ್ಯಸ್ವಾಮಿ, ನೀರಾವರಿ ಹೋರಾಟ ಸಮಿತಿ ಸದಸ್ಯ ಜಿಂಕಾ ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net