ಮೊಳಕಾಳ್ಮೂರಿನ 50 ವರ್ಷಗಳ ಇತಿಹಾಸದಲ್ಲಿ ಮಹತ್ವದ ಸಾಧನೆ: ಸಚಿವ ಶ್ರೀರಾಮುಲು ಹೇಳಿಕೆ

05122020 B Sriramulu
Published on

ಮೊಳಕಾಲ್ಮೂರು: ಮೊಳಕಾಲ್ಮೂರು ಕ್ಷೇತ್ರದ ಪ್ರಗತಿಯ ಮುನ್ನೋಟ ಬಯಸಿ 2 ಸಾವಿರ ಕೋಟಿ ರೂ. ಅನುದಾನ ತರುವ ಮೂಲಕ ಇಲ್ಲಿನ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ಬುಧವಾರ ತಾಲೂಕು ಆಡಳಿತ ಸೌಧದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ, ಆರೋಗ್ಯ, ಸಾಮಾಜಿಕ ವ್ಯವಸ್ಥೆಯಲ್ಲಿ ತಾಲೂಕು ಭರಪೂರ ಪ್ರಗತಿ ಕಂಡಿದೆ. ಇದು ಮೊಳಕಾಲ್ಮೂರಿನ 50 ವರ್ಷದ ರಾಜಕೀಯ ಇತಿಹಾಸದಲ್ಲಿ ಕಂಡರಿಯದ ಸಾಧನೆಯಾಗಿದೆ ಎಂದರು.

ತಾಲೂಕು ಆಡಳಿತ ಸೌಧ ಸೇರಿ 70 ಕೋಟಿ ರೂ. ವೆಚ್ಚದ ವಿವಿಧ ಜನಪರ ಕಾಮಗಾರಿಗಳು. ಸಾರಿಗೆ ಬಸ್ ನಿಲ್ದಾಣ ಹಾಗೂ ಡಿಪೋಗೆ ಅನುದಾನ ಮೀಸಲಿಟ್ಟಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net