

ಮೊಳಕಾಲ್ಮೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕರೊನಾ ತಡೆಗಟ್ಟಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಸಲಹೆ ನೀಡಿದರು.
ಇಲ್ಲಿನ ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ ಜಾಗೃತಿ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.
ಸಿಪಿಐ ಗೋಪಾಲನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾ ಮಾತನಾಡಿದರು. ತಹಸೀಲ್ದಾರ್ ಎಂ.ಬಸವರಾಜ್, ಮುಖ್ಯಾಧಿಕಾರಿ ಎಚ್.ಕಾಂತರಾಜ್, ಡಾ.ಟಿ.ಕೆ.ರಾಘವೇಂದ್ರ, ಪಿಎಸ್‌ಐ ಎಂ.ಬಸವರಾಜ್, ಗುಡ್ಡಪ್ಪ ಇದ್ದರು.