ಹೋಲ್‌ಸೇಲ್ ಅಂಗಡಿಗಳ ಮೇಲೆ ದಾಳಿ

MLK DAALI 21
Published on

ಮೊಳಕಾಲ್ಮೂರು: ನಗರದ ಹೋಲ್‌ಸೇಲ್ ಅಂಗಡಿಗಳ ಮೇಲೆ ಮಂಗಳವಾರ ಪಪಂ ಮುಖ್ಯಾಧಿಕಾರಿ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಗುಟ್ಖಾ, ಬೀಡಿ, ಸಿಗರೇಟ್ ಇನ್ನಿತರ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿತು.

ಲಾಕ್‌ಡೌನ್ ಹಿನ್ನ್ನೆಲೆಯಲ್ಲಿ ತಂಬಾಕು ಪದಾರ್ಥಗಳ ಮಾರಾಟ ಸಂಪೂರ್ಣ ನಿಷೇಧವೆಂಬ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಪಟ್ಟಣದ ಮೂರು ಅಂಗಡಿಗಳ ಮೇಲೆ ದಾಳಿ ನಡೆಯಿತು.

ಹಲವು ಬಾರಿ ನೋಟಿಸ್ ನೀಡಿದರೂ ಎಚ್ಚೆತ್ತುಕೊಳ್ಳದ ಕಿರಾಣಿ ಅಂಗಡಿ, ಬೀಡಾ ಸ್ಟಾಲ್ ಮಾಲೀಕರು ಎಚ್ಚೆತ್ತುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಎಚ್. ಕಾಂತರಾಜ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net