31 ಕಿರಾಣಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

mlk plastic-vasa.. Apr.. 22.
Published on

ಮೊಳಕಾಲ್ಮೂರು: ತಾಲೂಕಿನ ರಾಂಪುರ ಗ್ರಾಮದ 31 ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಗ್ರಾಪಂ ಅಧಿಕಾರಿಗಳು, ಒಂದು ಕ್ವಿಂಟಲ್‌ನಷ್ಟು ಪ್ಲಾಸ್ಟಿಕ್ ಬ್ಯಾಗ್ ಮತ್ತು ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರ-ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಮತ್ತು ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಿದ್ದರೂ ತಲೆಕೆಡಿಸಿಕೊಳ್ಳದೆ ಕದ್ದುಮುಚ್ಚಿ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಮಾರಾಟ ಮಾರಲಾಗುತ್ತಿತ್ತು. ಈ ದಂಧೆ ಮುಂದುವರಿಸಿದರೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಪಿಡಿಒ ಎನ್.ಕೆ. ಪಾಪನಾಯಕ ಮಾಲೀಕರಿಗೆ ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net