ಧಾರವಾಡ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ ರಜೆ

16 Dwd 5 Gurudatta Hegde DC
Published on

ಧಾರವಾಡ: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜು. 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.


ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 2- 3 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಸೋಮವಾರ ಒಂದು ದಿನ ಮಾತ್ರ ಜಿಲ್ಲೆಯ ರಜೆ ನೀಡಲಾಗಿದೆ.

ಈ ರಜಾ ದಿನವನ್ನು ಆಗಸ್ಟ್ 5ರ ಶನಿವಾರದಂದು ಪೂರ್ಣದಿನ ಶಾಲೆ ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net