ಶಾಲೆಗಳಲ್ಲಿ ಮಕ್ಕಳಿಗೆ ಪರಿಸರ ಪ್ರಜ್ಞೆ ಬೆಳೆಸಿ

24SPT1 -
Published on

ಸೋಮವಾರಪೇಟೆ: ಶಾಲೆಗಳಲ್ಲಿ ಮಕ್ಕಳಿಗೆ ಪರಿಸರ ಪ್ರಜ್ಞೆ ಬೆಳೆಸಿ ಭವಿಷ್ಯದಲ್ಲಿ ಪರಿಸರ ರಾಯಭಾರಿಗಳನ್ನಾಗಿ ರೂಪಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು ಸಲಹೆ ನೀಡಿದರು.

ರಾಷ್ಟ್ರೀಯ ಹಸಿರುಪಡೆ ಕಾರ್ಯಕ್ರಮದಡಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಇಲ್ಲಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತಾಲೂಕಿನ ಶಿಕ್ಷಕರಿಗೆ ಇತ್ತೀಚೆಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಪರಿಸರ ಕುರಿತ ಮಾಹಿತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಶಾಲೆಯಲ್ಲಿ ಗಿಡ-ಮರಗಳನ್ನು ಬೆಳೆಸಿ ಹಸಿರು ಪರಿಸರ ನಿರ್ಮಾಣ ಮಾಡುವ ಮೂಲಕ ಪರಿಸರ ಸ್ನೇಹಿ ಶಾಲೆಗಳನ್ನಾಗಿ ರೂಪಿಸಬೇಕು. ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ ಅವರನ್ನು ಜವಾಬ್ದಾರಿ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಕರ ಹೊಣೆಗಾರಿಕೆಯಾಗಿದೆ ಎಂದರು.

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಎಸ್.ಎ.ಯೋಗೇಶ್, ಕಾರ್ಯಕ್ರಮ ಸಮನ್ವಯಾಧಿಕಾರಿ ಎ.ಹರೀಶ್, ಸಂಸ್ಥೆಯ ಕಾರ್ಯಕ್ರಮ ಸಹಾಯಕ ಬಿ.ಬಿ.ರಕ್ಷಿತ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸಿ.ಆರ್.ಶಶಿಧರ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net