ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ

23kls1
ಬಸ್ರಿಕಲ್ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಾಹನಗಳ ತಪಾಸಣೆ ನಡೆಸುತ್ತಿರುವುದು.
Published on

ಕಳಸ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 51,500 ರೂ.ಹಣವನ್ನು ಕುದುರೆಮುಖ ವ್ಯಾಪ್ತಿಯ ಬಸ್ರಿಕಲ್ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಳಸದಿಂದ ಕುದುರೆಮುಖಕ್ಕೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ಮಾಡಿದಾಗ ದಾಖಲೆ ಇಲ್ಲದ 51,500 ರೂ. ನಗದು ಪತ್ತೆಯಾಗಿದೆ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳಾದ ಪದ್ಮರಾಜ್ ಮತ್ತು ತಂಡ, ಕುದುರೆಮುಖ ವೃತ್ತ ನಿರೀಕ್ಷಕ ಶರೀಫ್, ಪಿಎಸ್‌ಐ ಆದರ್ಶ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net