

ಸಿಂಧನೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಸೇವಾ ಕೇಂದ್ರದಲ್ಲಿ 100 ರಿಂದ 500 ರೂ. ಜನರಿಂದ ವಸೂಲಿ ಮಾಡುತ್ತಿದ್ದು, ಅಂತಹವರ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ತಹಸೀಲ್ದಾರ್ ಅರುಣ ದೇಸಾಯಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಚಾಲನೆ
ಬಾಪೂಜಿ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣೆ ಉಚಿತವಾಗಿದೆ. ಆದರೆ ಸೇವಾ ಕೇಂದ್ರದ ಸಿಬ್ಬಂದಿ ಅರ್ಜಿ ಸಲ್ಲಿಸಲು ಬಂದ ಜನರಿಂದ ಹಣ ಪಡೆಯುತ್ತಿರುವುದು ನಿಯಮ ಬಾಹಿರವಾಗಿದೆ. ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ನಿರುಪಾದಿ ಗೋಮರ್ಸಿ, ತಾಲೂಕಾಧ್ಯಕ್ಷ ಚನ್ನಬಸವ ಸೋಮಲಾಪುರ, ಕಾರ್ಯದರ್ಶಿ ಶರಣಪ್ಪ ಗೊರವ, ಶರಣಪ್ಪ ಹಂಚಿನಾಳ, ದ್ಯಾವಣ್ಣ, ಕೃಷ್ಣ ಸುಕಾಲಪೇಟೆ, ಅಮರೇಶ, ಶಂಕರ್‌ನಾಯಕ ಇದ್ದರು.