

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಅಕ್ಟೋಬರ್ ಮಳೆಗೆ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಬೆಳೆ ಹಾನಿಯÁದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಕಚೇರಿ, ಗ್ರಾಮ ಪಂಚಾಯಿತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. 54,491.17 ಹೆಕ್ಟೇರ್ ಕೃಷಿ ಬೆಳೆ, 11,161.52 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 65,652.69 ಹೆಕ್ಟೇರ್ ಕ್ಷೇತ್ರ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಹಾಗೂ ವರದಿಯಾದ ಬೆಳೆ ಬದಲಾಗಿದ್ದರೆ ಲಿಖಿತ ಆಕ್ಷೇಪಣೆಗಳನ್ನು ಆಯಾ ತಹಸೀಲ್ದಾರ್, ಕೃಷಿ , ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳಲ್ಲಿ 7 ದಿನಗಳೊಳಗೆ ಸಲ್ಲಿಸಬೇಕು. ಆಕ್ಷೇಪಣೆ ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ಪರಿಹಾರ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಽಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.