ಮುಂಗಾರು, ಹಿಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರ ಜಮೆ ಮಾಡಿ

281120 Yalaburga Farmers Appeal
ಬೆಳೆ ವಿಮೆ ಶೀಘ್ರ ಜಮೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಅಂದಪ್ಪ ಕೋಳೂರು ಯಲಬುರ್ಗಾದ ಗ್ರೇಡ್2 ತಹಸೀಲ್ದಾರ್ ನಾಗಪ್ಪ ಸಜ್ಜನ್‌ಗೆ ಮನವಿ ಸಲ್ಲಿಸಿದರು.
Published on

ಯಲಬುರ್ಗಾ: ಜಿಲ್ಲೆಯ ರೈತರಿಗೆ 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಪಟ್ಟಣದ ಗ್ರೇಡ್2 ತಹಸೀಲ್ದಾರ್ ನಾಗಪ್ಪ ಸಜ್ಜನ್ ಮೂಲಕ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ಕೋಳೂರು ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಸುರಿದ ಭಾರಿ ಮಳೆಗೆ ರೈತರು ಬೆಳೆದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಮಳೆಯಿಂದಾಗಿ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿದೆ. ಇದರಿಂದ ಬಿತ್ತನೆಗೆ ಸಾವಿರಾರು ರೂ. ಖರ್ಚು ಮಾಡಿ ಜಮೀನು ಹದಗೊಳಿಸಿದ ರೈತರು ಮತ್ತಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಹಾಳಾದ ಬೆಳೆಗೆ ಪರಿಹಾರ ಒದಗಿಸುತ್ತಿಲ್ಲ. 2019-20ನೇ ಸಾಲಿನಲ್ಲಿ ರೈತರು ಬೆಳೆ ಸಾಲ ತುಂಬಿದ್ದು ವಿಮೆ ಇದೂವರೆಗೂ ರೈತರ ಖಾತೆಗೆ ಜಮೆ ಆಗಿಲ್ಲ. ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net