ಕೊಡಗು ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಮೀಕ್ಷೆ ಆರಂಭ

download
Published on

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಒಟ್ಟು ೫೨೫ ಹಳ್ಳಿಗಳಿಲ್ಲಿ ೨,೯೩,೩೭೮ ಸರ್ವೆ ನಂಬರ್‌ಗಳಿದ್ದು, ಈ ಪೈಕಿ ೨,೬೪,೦೮೬ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಾಲರಾಜ್ ರಂಗರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟು ೩೧೬ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.


ಜಿಲ್ಲೆಯ ರೈತರು ಅವಕಾಶವನ್ನು ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ ೭೮೪೮೯೧೪೯೧೫ ಮತ್ತು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ ೮೪೪೮೪೪೭೭೧೫, ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಬಾಲರಾಜ್ ರಂಗರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net