ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಮಾನ್ಸೂನ್ ಮ್ಯಾರಥಾನ್

12pnd1
ಪಾಂಡವಪುರ ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆಗೆ ಜಿಪಂ ಮಾಜಿ ಸದಸ್ಯೆ ನಾಗಮ್ಮಪುಟ್ಟರಾಜು ಅವರು ಚಾಲನೆ ನೀಡಿದರು.
Published on

ಪಾಂಡವಪುರ: ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆ ನಡೆಯಿತು.

ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಆವರಣದಿಂದ ಹೊರಟ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆಗೆ ಜಿಪಂ ಮಾಜಿ ಸದಸ್ಯೆ ನಾಗಮ್ಮಪುಟ್ಟರಾಜು ಚಾಲನೆ ನೀಡಿದರು.

ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಶಾಲೆಯ ಸುಮಾರು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆ ಆವರಣದಿಂದ ಹೊರಟ ವಿದ್ಯಾರ್ಥಿಗಳು ಚಿನಕುರಳಿ ಪ್ರಮುಖ ಬೀದಿ ಮೂಲಕ 6 ಕಿಮೀ ಓಡುವ ಮೂಲಕ ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳ ಸುರಕ್ಷಿತಕ್ಕಾಗಿ ಅಲ್ಲಲ್ಲಿ ನೀರಿನ ವ್ಯವಸ್ಥೆ, ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ತಂಪು ಪಾನೀಯ ನೀಡಲಾಯಿತು. ನಂತರ ಮಾನ್ಸೂನ್ ಮ್ಯಾರಥಾನ್‌ನಲ್ಲಿ ವಿಜೇತರಾದ 24 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಜಿಪಂ ಮಾಜಿ ಸದಸ್ಯೆ ನಾಗಮ್ಮಪುಟ್ಟರಾಜು ಮಾತನಾಡಿ, ಮಕ್ಕಳಿಗೆ ಶಿಕ್ಷಣ ಚಟುವಟಿಕೆಯ ಜತೆಗೆ ಕ್ರೀಡಾಚಟುವಟಿಕೆಗಳು ಅತ್ಯಗತ್ಯವಾಗಿದೆ. ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಮಾಚಮ್ಮ, ಆಡಳಿತಾಧಿಕಾರಿ ನಿವೇದಿತಾ ನಾಗೇಶ್, ಉಪ ಪ್ರಾಂಶುಪಾಲ ಲಿಂಗರಾಜು, ಸಮನ್ವಯಧಿಕಾರಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net