

ಬೆಂಗಳೂರು: ರಾಜ್ಯದಲ್ಲಿ ಅರ್ಭಟಿಸುತ್ತಿರುವ ಮುಂಗಾರು ಮಳೆ ಮುಂದಿನ 5 ದಿನ ಮುಂದುವರಿಯಲಿದ್ದು, ದೈನಂದಿನ ಜನಜೀವನ ಮತ್ತಷ್ಟು ಅಸ್ತವ್ಯಸ್ತವಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆ.7ರಂದು ರೆಡ್ ಅಲರ್ಟ್ ಹಾಗೂ ಆ.8-10ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿ ವೇಗ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ 2 ಜಿಲ್ಲೆಗೆ ರೆಡ್, 7 ಜಿಲ್ಲೆಗೆ ಆರೆಂಜ್ ಅಲರ್ಟ್
ಕೇರಳದಲ್ಲಿಯೂ ಗುರುವಾರದಂದು ಭಾರೀ ಪ್ರಮಾಣದ ಮಳೆ ಸುರಿದಿದೆ. ರಾಜ್ಯದ ವಯ್ನಾಡು ಮತ್ತು ಕೋಜಿಕೋಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಿಸಲಾಗಿತ್ತು. ಉಳಿದ ಏಳೂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿತ್ತು. ತಿರುವನಂತಪುರಂ, ಕೊಲ್ಲಂ, ಇದುಕ್ಕಿ, ಎರ್ನಾಕುಲಂ, ಮಲಪ್ಪುರಂ, ಕಣ್ಣೂರು ಸೇರಿದಂತೆ ಹಲವೆಡೆ ಗಂಟೆಗೆ 40ಕಿ.ಮೀಗೂ ಹೆಚ್ಚಿನ ವೇಗದಲ್ಲಿ ಗಾಳಿ ಬೀಸಿದೆ. ಕರಾವಳಿ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 50-60ಕಿ.ಮೀಗೂ ಹೆಚ್ಚಿತ್ತು. ಅನೇಕ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ ಎಂದು ರಾಜ್ಯ ಸರ್ಕಾರ ವರದಿ ಮಾಡಿದೆ.