

ಬೆಂಗಳೂರು: ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು ಮಳೆ, ಮುಂದಿನ 4 ದಿನ ಮುಂದುವರಿಯಲಿದೆ. ಬೆಂಗಳೂರು, ಬೆಳಗಾವಿ, ತುಮಕೂರು, ಹಾಸನ, ಮೈಸೂರು ಸೇರಿ ವಿವಿಧ ಭಾಗಗಳಲ್ಲಿ ಬುಧವಾರ ಭರ್ಜರಿ ವರ್ಷಧಾರೆಯಾಗಿದ್ದು, ಇಳೆಗೆ ತಂಪೆರೆದಿದೆ. ಭಾನುವಾರ ( ಜೂ 2) ರಾಜ್ಯಕ್ಕೆ ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್ ರಾಜ್ಯಾದ್ಯಂತ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿ ರಾಜ್ಯಾದ್ಯಂತ ಮಳೆ ಬಿರುಸಾಗಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಜೂ 6ರಿಂದ ರಿಂದ ಜೂ 8ರವರೆಗೆ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಹಾಗೂ ದಣ ಕನ್ನಡ, ಗದಗ, ಹಾಸನ, ಬಳ್ಳಾರಿಯಲ್ಲಿ ಜೂ 6ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ಘೋಷಿಸಿದೆ. ಮೈಸೂರು, ದಾವಣಗೆರೆಯಲ್ಲಿ ಜೂ 7ರಂದು, ಉಡುಪಿ, ದಣ ಕನ್ನಡ, ಉತ್ತರ ಕನ್ನಡ ಜೂ 10ರಂದು ಯೆಲ್ಲೋ ಅರ್ಲಟ್ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಉಷ್ಣಾಂಶ ಕುಸಿತ: ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತವಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸರಾಸರಿ 35&36 ಡಿ.ಸೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 30-32 ಅಸುಪಾಸಿನಲ್ಲಿ ತಾಪಮಾನ ದಾಖಲಾಗುತ್ತಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ 30 ಡಿ.ಸೆ.ದೊಳಗೆ ಕಂಡುಬರುತ್ತಿದೆ.