ಹುಬ್ಬಳ್ಳಿ: ಪ್ರೋಬಸ್ ಕ್ಲಬ್ ಉಣಕಲ್ಲನ ಸೆಪ್ಟೆಂಬರ್ ಮಾಸಿಕ ಸಭೆ ಮತ್ತು ಉಪನ್ಯಾಸ ಕಾರ್ಯಕ್ರಮ ಲಿಂಗರಾಜನಗರದ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಸೆ. 18ರಂದು ಬೆಳಗ್ಗೆ 11ಗಂಟೆಗೆ ನಡೆಯಲಿದೆ. ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಗೋವಿಂದಪ್ಪ ಗೌಡಪ್ಪಗೋಳ ಅವರು ಸೇವೆಯೇ ಮೋಕ್ಷಕ್ಕೆ ಸಾಧನ ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಕ್ಲಬ್ ಅಧ್ಯಕ್ಷ ಡಾ. ಎಂ.ಬಿ. ಸಜ್ಜನರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಡಾ. ಬಿ. ವಿ. ಹಳೇಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.