

ಕುಶಾಲನಗರ:
ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗವಾಗಿರುವ ಕಾರಣ ಸಾರ್ವಜನಿಕರು ಆರೋಗ್ಯದತ್ತ ಹೆಚ್ಚಿನ ಒಲವು ಹೊಂದುವುದು ಅತ್ಯಗತ್ಯವಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸತೀಶ್ ಕುಮಾರ್ ಹೇಳಿದರು. ಕುಶಾಲನಗರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಆಯಾಯ ವ್ಯಾಪ್ತಿಯ ವೈದ್ಯ ಸಿಬ್ಬಂದಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯದ ಅರಿವು ಮೂಡಿಸಬೇಕು. ಪೌಷ್ಠಿಕ ಆಹಾರಗಳನ್ನು ಹೆಚ್ಚಾಗಿ ಬಳಸಬೇಕು. ನೀರನ್ನು ಕುದಿಸಿ ಆರಿಸಿ ಕುಡಿಯಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಮನೆಯ ಆಸುಪಾಸಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಮಧುಸೂದನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಇಂದೂಧರ್, ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ಇದ್ದರು.
ಸಭೆಯಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಆರೋಗ್ಯ ಘಟಕಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ನಿರೀಕ್ಷಕರು ಇದ್ದರು.