

ಚಿಕ್ಕಮಗಳೂರು: ನಗರದ ವಾರ್ಡ್-೧೬ ರ ಗೌರಿಕಾಲುವೆ, ನೆಹರು ನಗರ, ೬೦ ಅಡಿ ರಸ್ತೆಯಿಂದ ಉಪ್ಪಳ್ಳಿ ಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆ-ಸೇತುವೆಯನ್ನು ದುರಸ್ಥಿಪಡಿಸುವಂತೆ ಒತ್ತಾಯಿಸಿ ಮಾಂಟಿ ಎಂಜಲ್ಸ್ ಇಂಟರ್ ನ್ಯಾಷನಲ್ ಶಾಲೆ ಆಡಳಿತ ಮಂಡಳಿ ಸದಸ್ಯರು ಮಂಗಳವಾರ ಡಿಸಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಶಾಲೆಯ ಮುಖ್ಯಸ್ಥ ಜೋಸೆಫ್ ಮ್ಯಾನ್ಯೂವಲ್, ಇದೇ ರಸ್ತೆಯಲ್ಲಿ ತಮ್ಮ ಶಾಲೆ ಇದೆ. ರಾಮೇಶ್ವರ ಕೆರೆಯಿಂದ ಬರುವ ನೀರಿಗೆ ಕಾಲುವೆಯ ಮೇಲೆ ಸೇತುವೆ ನಿರ್ಮಾಣ ಮಾಡಿದ್ದು, ಅದು ಶಿಥಿಲಗೊಂಡು ಸೇತುವೆಯ ಮೇಲೆ ನೀರು ಹರಿದುಹೋಗುತ್ತಿರುವುದರಿಂದ ಜೀವವನ್ನು ಕೈಯಲ್ಲಿ ಹಿಡಿದು ನಡೆದಾಡಬೇಕಾಗಿದೆ ಎಂದರು.
ಇದೇ ರಸ್ತೆಯಿಂದ ನಮ್ಮ ಶಾಲೆಗೆ ವಿದ್ಯಾರ್ಥಿಗಳನ್ನು ಬಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದು, ಈ ಬಡಾವಣೆಯಲ್ಲಿ ೧೦೦ ಕ್ಕೂ ಹೆಚ್ಚು ಮನೆಗಳು ಇವೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಈ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ಈ ಸೇತುವೆ ಅಕ್ಕ-ಪಕ್ಕದಲ್ಲಿ ಅಕ್ಕಪಕ್ಕದವರು, ನೆರೆಹೊರೆಯವರು ಕಸ ಎಸೆದು ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಈ ದಾರಿಯಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿದೆ ಎಂದು ಹೇಳಿದರು.
ಈ ಸಂಬAಧ ಕಳೆದ ಮೂರು ವರ್ಷಗಳಿಂದ ಸಂಬAಧಪಟ್ಟ ಅಧಿಕಾರಿಗಳು, ವಾರ್ಡ್ ಸದಸ್ಯರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿರುವುದರಿಂದ ಶಾಲಾ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿದೆ. ಈ ಕೂಡಲೇ ಸೇತುವೆ ದುರಸ್ಥಿ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ಸ್ಟೀವನ್ ಡಿಸೋಜ, ಶಾನ್ ಡಿಸೋಜ, ಶಿವಕುಮಾರ್ ಉಪಸ್ಥಿತರಿದ್ದರು.