ಮಾರ್ಚ್ 24 ರಂದು ಸಾಂಸ್ಕೃತಿಕ ನಗರಿಯಲ್ಲಿ ಬೆಳದಿಂಗಳ ಸಂಗೀತ

music programme
Published on

ಮೈಸೂರು: ಸಂಗೀತ ರಸಿಕರ ಮೆಚ್ಚುಗೆ ಗಳಿಸಿರುವ ಉಸ್ತಾದ್ ಸರ್ಫರಾಜ್ ಖಾನ್ ಮತ್ತು ಉಸ್ತಾದ್ ಫರಾಜ್ ಖಾನ್ ಅವರು ಮಾರ್ಚ್ 24 ರಂದು ಸಾಂಸ್ಕೃತಿಕ ನಗರಿಯಲ್ಲಿ ಸಂಗೀತದ ಕಂಪು ಚೆಲ್ಲಲಿದ್ದಾರೆ.

ಅಂದು ಸಂಜೆ 6 ಗಂಟೆಗೆ ಬೆಳದಿಂಗಳ ಸಂಗೀತ-265 ರ ಅಂಗವಾಗಿ ಚಾಮುಂಡಿಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಶಾಖಾ ಮಠದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂಗೀತ ಸುಧೆ ಹರಿಸಲಿದ್ದಾರೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇವರಿಗೆ ಪಂ. ವೀರಭದ್ರಯ್ಯ ಹಿರೇಮಠ (ಹಾರ್ಮೋನಿಯಂ), ಪಂ. ಸುಮಿತ್ ನಾಯಕ್ (ತಬಲ) ಸಾಥ್ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net