

ಹುಬ್ಬಳ್ಳಿ : ರಕ್ತಪಾತವಿಲ್ಲದೇ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳನ್ನು ತರುವಂತಹ ವ್ಯವಸ್ಥೆಯೇ ಪ್ರಜಾಪ್ರಭುತ್ವ ಎನ್ನುವ ಮೂಲಮಂತ್ರದೊಂದಿಗೆ ನಮ್ಮ ಸಂವಿಧಾನವನ್ನು ರಚಿಸಲಾಗಿದೆ ಎಂದು ಮೊರಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಮಹಾದೇವಿ ಪಾಟೀಲ ಹೇಳಿದರು.
ನಗರದ ಶ್ರೀ ಜಗದ್ಗುರು ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಸಂವಿಧಾನವನ್ನು ಚಾಚೂತಪ್ಪದೇ ಅನುಸರಿಸಿದಾಗ ಮಾತ್ರ ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಸಾಧ್ಯ ಎಂದರು.
ಪ್ರಾಚಾರ್ಯು ಡಾ. ಸಿಸಿಲಿಯಾ ಡಿಕ್ರೂಜ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಹದೇವ ಹರಿಜನ ಪ್ರಾಸ್ತಾವಿಕ ಮಾತನಾಡಿದರು. ಡಾ. ರಘು ಅಕಮಂಚಿ ಅವರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳ ಕುರಿತು ಮಾತನಾಡಿದರು. ವೇದಿಕೆಯ ಮೇಲೆ ಐಕ್ಯೂಎಸಿ ಸಂಯೋಜಕ ಪ್ರೊ. ಶಿವಕುಮಾರ ಬನ್ನಿಹಟ್ಟಿ, ಅನುರಾಧ ಹೊಸಕೋಟಿ, ಲಕ್ಷ ಣ ಹೊಸಮನಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕರಾದ ಡಾ. ಗುರುರಾಜ ನವಲಗುಂದ, ಡಾ. ತಾಯಣ್ಣ, ಪ್ರೊ. ಶಶಾಂಕ ಬಿ.ಕೆ., ಪ್ರೊ. ಶಿವಕುಮಾರ ಪ್ರಭಯ್ಯನವರಮಠ, ಪ್ರೊ. ಅಶ್ವಿನಿ ಇಂದರಗಿ, ಶಾರಧಾ ಬಡಿಗೇರ, ಕಾವ್ಯಾ ಸಾಲಿಮಠ ಹಾಗೂ ಇತರರು ಹಾಜರಿದ್ದರು.