ನೈತಿಕ ಹೊಣೆ ಹೊತ್ತು ಸಿಎಂ-ಡಿಸಿಎಂ ರಾಜಿನಾಮೆ ನೀಡಲಿ

5 KMP 03
ರಾಜು ನಾಯಕ
Published on

ಕಂಪ್ಲಿ: ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಆರೋಪಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕೆ ಹೇಳಿಕೆ ನೀಡಿ, ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣವಾಗಿದೆ. ಲಕ್ಷಾಂತರ ಅಭಿಮಾನಿಗಳು ಸೇರುತ್ತಾರೆನ್ನುವುದು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ ಸೂಕ್ತ ಕ್ರಮವಹಿಸದೆ ತರಾತುರಿಯಲ್ಲಿ ಸಮಾರಂಭ ಆಯೋಜಿಸಿದ್ದರಿಂದ 11ಜನ ಪ್ರಾಣ ಕಳೆದುಕೊಂಡಿದ್ದು, ಸುಮಾರು 40ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 50ಲಕ್ಷ ರೂ. ಪರಿಹಾರ ನೀಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net