ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳ ನೈತಿಕ ಬೆಂಬಲ, ಶಾಲೆಗಳಿಗೆ ರಜೆ ಇರುತ್ತಾ/ ಇಲ್ಲವಾ?

Karnataka Bandh
Published on

ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ವಿವಿಧ ಸಂಘಟನೆಗಳು ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವುದಕ್ಕೆ ಖಾಸಗಿ ಶಾಲೆಗಳು ನೈತಿಕ ಬೆಂಬಲ ನೀಡಿದ್ದು, ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಮುಂದಾಗಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ರಾಜ್ಯದ ನೆಲ-ಜಲ, ಭಾಷೆ, ಸಂಸ್ಕೃತಿ ವಿಷಯದಲ್ಲಿ ನೈತಿಕವಾಗಿ ಖಾಸಗಿ ಶಾಲೆಗಳು ಬೆಂಬಲ ನೀಡುತ್ತಾ ಬಂದಿದೆ. ಈ ಬಾರಿಯೂ ರಾಜ್ಯದ ಶಿಕ್ಷಣ ಸಂಸ್ಥೆಗಳು ಬೋಧಕ, ಬೋಧಕೇತರ ಮತ್ತು ಆಡಳಿತ ಮಂಡಳಿ ಸದಸ್ಯರು ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬುಧವಾರ ಮತ್ತು ಗುರುವಾರದಿಂದ (ಸೆ.27ರಿಂದ) ಮಧ್ಯ ವಾರ್ಷಿಕ ಪರೀಕ್ಷೆಗಳು ಆರಂಭವಾಗುವುದರಿಂದ ಶಾಲೆಗಳಿಗೆ ರಜೆ ನೀಡಲು ಸಾಧ್ಯವಿಲ್ಲ. ಹೀಗಾಗಿ ನೈತಿಕ ಬೆಂಬಲ ನೀಡಲಾಗಿದೆ. ಪರಿಸ್ಥಿತಿ ನೋಡಿ ಆಯಾ ಶಾಲಾ ಆಡಳಿತ ಮಂಡಳಿಗಳು ನಿರ್ಧಾರ ಕೈಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net