

ಕುಂದಾಪುರ: ಇಂದಿನ ದಿನಗಳಲ್ಲಿ ಬಹಳ ಕಡೆಗಳಲ್ಲಿ ವಿಭಕ್ತ ಕುಟುಂಬ ನೋಡುತ್ತಿದ್ದೇವೆ. ಅವಿಭಕ್ತ ಕುಟುಂಬಗಳಲ್ಲಿ ಬಹಳಷ್ಟು ಸಹಾಯ, ಅನುಕೂಲಗಳಿರುತ್ತಿತ್ತು. ಯುವಜನರಿಗೆ ಬೇಕಾದ ನೈತಿಕ ಬೆಂಬಲ ಹಾಗೂ ಹೇಗೆ ಜೀವನ ನಡೆಸಬೇಕೆಂದು ಹಿರಿಯರು ತೋರಿಸಿಕೊಟ್ಟಿದ್ದಾರೆ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಶಾಖೆ ವತಿಯಿಂದ ವಕ್ವಾಡಿಯಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ವಾಣಗೊಳ್ಳಲಿರುವ ರೆಡ್‌ಕ್ರಾಸ್ ಹೋಮ್ ಫಾರ್ ಸೀನಿಯರ್ ಸಿಟಿಜನ್ಸ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಟಕದ ಉಪಾಧ್ಯಕ್ಷ, ನಿವೃತ್ತ ಎಡಿಜಿಪಿ ಭಾಸ್ಕರ ರಾವ್, ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ವಾತನಾಡಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಶಾಖೆ ಸಭಾಪತಿ ಎಸ್.ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಟಕದ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಮರಳೀಧರ, ಕಟ್ಟಡ ನಿರ್ವಾಣ ಸಮಿತಿ ಸಂಚಾಲಕ ವೈ.ಸೀತಾರಾಮ ಶೆಟ್ಟಿ, ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ, ತಾಲೂಕು ಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಉಪಸಭಾಪತಿ ಡಾ.ಉಮೇಶ ಪುತ್ರನ್ ಸ್ವಾಗತಿಸಿದರು. ಖಜಾಂಚಿ ಶಿವರಾಮ ಶೆಟ್ಟಿ ವಂದಿಸಿದರು. ಡಾ.ಸೋನಿ ಡಿಕೋಸ್ಟ ನಿರೂಪಿಸಿದರು.