ಮೊಬೈಲ್ ಬಳಕೆಯಿಂದ ನೈತಿಕ ಮೌಲ್ಯ ಕುಸಿತ

29-KGL-1
ಪಟ್ಟಣದ ಗುರುಭವನದಲ್ಲಿ ಭಾನುವಾರ ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಪುರಸ್ಕರಿಸಲಾಯಿತು.
Published on

ಕೊಳ್ಳೇಗಾಲ: ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಶಿಕ್ಷಣ, ನೈತಿಕ ಮೌಲ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘದ ಅಧ್ಯಕ್ಷ ಬಸವರಾಜು ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಗುರುಭವನದಲ್ಲಿ ಭಾನುವಾರ ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೊಬೈಲ್‌ಗಳು ಮಕ್ಕಳ ಶಿಕ್ಷಣಕ್ಕೆ ಬಹುಮಟ್ಟಿಗೆ ಅಡ್ಡಿಯಾಗುತ್ತಿವೆ. ಪಾಲಕರು ಮತ್ತು ಶಿಕ್ಷಕರು ಈ ಬಗ್ಗೆ ಹೆಚ್ಚು ಜಾಗರೂಕರಾಗಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರು, ಶಿಕ್ಷಕರು ಮತ್ತು ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಕುರಿತು ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪುರಸ್ಕಾರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ನಾಯಕ ಸಮುದಾಯದ 55 ಮಕ್ಕಳನ್ನು ಪುರಸ್ಕರಿಸಲಾಯಿತು. ಜತೆಗೆ ನಿವೃತ್ತ ಉಪನ್ಯಾಸಕ ಎಲ್.ಉಮೇಶ್, ಶಿಕ್ಷಕರಾದ ನಾಗರತ್ನಮ್ಮ, ಸಂಗೀತ ಶಿಕ್ಷಕ ವೆಂಕಟರಂಗನಾಯಕ, ಸಮಾಜ ಸೇವಕರಾದ ರಘು ಹಾಗೂ ಭಾಗ್ಯಮ್ಮ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ನಾಯಕ ಸರ್ಕಾರಿ ನೌಕರರ ಸೇವಾ ಸಂಘದ ಅಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ಶಾಂತರಾಜು, ಕಾರ್ಯದರ್ಶಿ ಬೆಟ್ಟಣಯ್ಯ, ಖಜಾಂಚಿ ರಾಜು, ಸಂಘಟನಾ ಕಾರ್ಯದರ್ಶಿ ಮಹದೇವಸ್ವಾಮಿ, ಬೆಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹದೇವ ನಾಯಕ, ಉಪನ್ಯಾಸಕ ಆನಂದ್, ನಂಜುಂಡಪ್ಪ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net