ಆಹಾರದ ಬಗ್ಗೆ ಹೆಚ್ಚಿನ ನಿಗಾ ಅಗತ್ಯ

gan-15
Published on

ಕುಂದಾಪುರ: ನಾವೆಲ್ಲರೂ ತಿನ್ನುತ್ತಿರುವ ಆಹಾರದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಎಷ್ಟು, ಏನು, ಯಾವಾಗ ಮತ್ತು ಯಾವುದನ್ನು ತಿನ್ನಬೇಕು ಎಂಬುವುದು ಬಹಳ ಮುಖ್ಯ ಎಂದು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜು ನಿವೃತ್ತ ಪ್ರಾಧ್ಯಾಪಕ ಡಾ.ಜಿ.ಎಚ್.ಪ್ರಭಾಕರ ಶೆಟ್ಟಿ ಹೇಳಿದರು.

ಕುಂದಾಪುರ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಿಜ್ಞಾನ ಕ್ಲಬ್ ಮತ್ತು ಇಕೋ ಕ್ಲಬ್ ಆಶ್ರಯದಲ್ಲಿ ಆಹಾರ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ರಂಜಿತ್ ಹಾಗೂ ಅನುಷಾ ಎಲ್. ಉಪಸ್ಥಿತರಿದ್ದರು. ಗಣಕ ವಿಜ್ಞಾನ ಉಪನ್ಯಾಸಕಿ ಅಮಿತಾ ಕೆ.ವಿ. ಸ್ವಾಗತಿಸಿ, ಇಕೋ ಕ್ಲಬ್ ಸಂಚಾಲಕ ನಾಗರಾಜ ಯು. ಪ್ರಾಸ್ತಾವಿಕವಾಗಿ ಮಾತನಾಡಿದರು. ಭೌತಶಾಸ್ತ್ರ ವಿಭಾಗ ಉಪನ್ಯಾಸಕಿ ಲಲಿತಾ ಬಾ ವಂದಿಸಿದರು. ವಿದ್ಯಾರ್ಥಿನಿ ಐಶಾ ನಿದಾ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net