

ಕೋಟ: ರೈತರಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಒದಗಿಸುವಂತಾಗಬೇಕು ಎಂದು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ರಾಮಚಂದ್ರ ಐತಾಳ್ ಹೇಳಿದರು.
ಪಾಂಡೇಶ್ವರ ಯಡಬೆಟ್ಟಿನಲ್ಲಿ ಶುಕ್ರವಾರ ಕೋಟ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಾಂಡೇಶ್ವರ ಯಡಬೆಟ್ಟು ಹಿರಿಯ ಕೃಷಿಕ ರಾಮಕೃಷ್ಣ ಐತಾಳ್ ಅವರಿಗೆ ಪಂಚವರ್ಣ ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು.ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಸ್ತಾನ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗೋವಿಂದ ಪೂಜಾರಿ ಅಭಿನಂದನಾ ಮಾತನಾಡಿದರು. ಪಾಂಡೇಶ್ವರ ಗ್ರಾಪಂ ಸದಸ್ಯೆ ಕಲ್ಪನಾ ದಿನಕರ್, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ.ಮಯ್ಯ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕಿ ಸುಜಾತಾ ಎಂ.ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು.