ಎಲ್ಲ ಕ್ಷೇತ್ರಕ್ಕಿಂತಲೂ ಕೊಡಗಿಗೆ ಹೆಚ್ಚಿನ ಅನುದಾನ

ಎಲ್ಲ ಕ್ಷೇತ್ರಕ್ಕಿಂತಲೂ ಕೊಡಗಿಗೆ ಹೆಚ್ಚಿನ ಅನುದಾನ
Published on

ಸಿದ್ದಾಪುರ: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗಿಂತಲೂ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಸಿದ್ದಾಪುರ-ವಿರಾಜಪೇಟೆ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಕಳೆದ ಒಂದೂವರೆ ವರ್ಷಗಳಿಂದಲೂ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಮುನ್ನಡೆಯುತ್ತಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ. ಬಿಡುವಿಲ್ಲದ ಮಳೆಯಿಂದ ರಸ್ತೆ ಕಾಮಗಾರಿಗಳು ವಿಳಂಬವಾಗುತ್ತಿದ್ದು, ಹಂತಹಂತವಾಗಿ ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಚರಂಡಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ.

ಕಳೆದ 25 ವರ್ಷಗಳಿಂದ ನಡೆಯದ ಅಭಿವೃದ್ಧಿ ಕಾರ್ಯಗಳು ಈಗ ನಡೆಯುತ್ತಿವೆ. ಕೇವಲ ಭೂಮಿಪೂಜೆಗೆ ಕಾರ್ಯಕ್ರಮ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಸಿದ್ದಾಪುರ, ಮಾಲ್ದಾರೆ ಸುತ್ತಮುತ್ತಲ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಸದ್ಯದಲ್ಲೇ ಪರಿಹಾರ ಒದಗಿಸಲಾಗುವುದು ಎಂದರು.

ವಿರಾಜಪೇಟೆ ತಹಸೀಲ್ದಾರ್ ರಾಮಚಂದ್ರ, ಕಂದಾಯ ಪರಿವೀಕ್ಷಕ ಅನೀಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿಪೂಣಚ್ಚ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ಜಾನ್ಸನ್, ಜಿ.ಪಂ. ಮಾಜಿ ಸದಸ್ಯ ಎಂ.ಎಸ್. ವೆಂಕಟೇಶ್, ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ, ಉಪಾಧ್ಯಕ್ಷ ಪಳನಿ ಸ್ವಾಮಿ, ಓಮಪ್ಪ ಬಣಕರ್, ಸದಸ್ಯ ಜಾಫರ್, ಪ್ರೇಮಾ, ಸಮೀರ ಸೇರಿದಂತೆ ಕಾಂಗ್ರೆಸ್ ಕಾರ್ಯಕತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net