ಬಜೆಟ್‌ನಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ

Published on

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಪ್ರಸ್ತುತ ಬಜೆಟ್‌ನಲ್ಲಿ ವಿಶೇಷವಾದ ಅನುದಾನ ನೀಡಲಿದ್ದಾರೆಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ರೈತರ ಜೀವನಾಡಿ ಮಂಡ್ಯದ ಮೈಷುಗರ್ ಸಕ್ಕರೆಯ ಕಾರ್ಖಾನೆಯ ಅಭಿವೃದ್ಧಿಗೆ ಹಾಗೂ ಮದ್ದೂರು ತಾಲೂಕಿನ ಕೊನೇ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವ ಉದ್ದೇಶದಿಂದ ನಾಲೆಗಳ ಆಧುನೀಕರಣಕ್ಕೆ ವಿಶೇಷ ಅನುದಾನ ನೀಡಲಿದ್ದಾರೆಂದು ಶಿವಪುರದಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಿರುವುದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net