ಕರಾವಳಿ ಜಿಲ್ಲೆಯಲ್ಲಿ ಇನ್ನಷ್ಟು ಮಳೆ ಜೋರು: ಉಳಿದೆಡೆ ಸಾಧಾರಣ ವರ್ಷಧಾರೆ

rain
Published on

ಬೆಂಗಳೂರು:ರಾಜ್ಯದ ಹಲವೆಡೆ ಭಾನುವಾರವೂ ಮಳೆ ಸುರಿದಿದೆ.ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಮಂಕಿ, ಗೋಕರ್ಣ, ಉಡುಪಿಯ ಸಿದ್ದಾಪುರ ಮತ್ತು ಉಡುಪಿ ನಗರದಲ್ಲಿ ತಲಾ 70, ಕೋಟ 60 ಮತ್ತು ಕದ್ರಾ 50 ಮಿಮೀ ಬಿದ್ದಿತ್ತು.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 3 ದಿನ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಜು.17ರಿಂದ ಜು.20ರವರೆಗೆ ಈ ಮೇಲಿನ ಜಿಲ್ಲೆಗಳಲ್ಲಿ ಇನ್ನಷ್ಟು ಜೋರಾಗಿ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಸಹ ಕೊಡಲಾಗಿದೆ. ಶಿವಮೊಗ್ಗ, ಕೊಡಗು,ಚಿಕ್ಕಮಗಳೂರಿನಲ್ಲಿ ಜು.17ರಿಂದ ಮುಂದಿನ 4 ದಿನ ಹಾಗೂ ಹಾಸನ, ಮೈಸೂರಿನಲ್ಲಿ ಜು.18ರಂದು ಯೆಲ್ಲೋ ಅಲರ್ಟ್ ಇರಲಿದೆ.

ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಮುಸುಕಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 3 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಈ ಅವಧಿಯಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 20 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net