

ಕೆ.ಎಂ.ದೊಡ್ಡಿ: ವಿದ್ಯಾರ್ಥಿಗಳು ಕೈಬರಹದಲ್ಲಿ ಪ್ರತಿಕ್ರೆಗಳಿಗೆ ಬರೆಯುವುದರಿಂದ ಹೆಚ್ಚಿನ ಜ್ಞಾನ ಲಭಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು.
ಇಲ್ಲಿನ ಭಾರತೀ ಕಾಲೇಜು ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀ ಕೈಬರಹ ಪತ್ರಿಕೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡಿಜಿಟಲ್ ಕ್ಷೇತ್ರ ಎಷ್ಟೇ ಮುಂದುವರಿದರೂ ಪ್ರತಿಕೆಗಳನ್ನು ಓದಿದಾಗ ಮಾತ್ರ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಕೆಗಳಲ್ಲಿ ಕೈಬರಹದಲ್ಲಿ ಬರೆಯುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ ಎಂದರು.
ವಿದ್ಯಾರ್ಥಿ ದಿಸೆಯಲ್ಲೇ ಕೈಬರಹವನ್ನು ರೂಢಿಸಿಕೊಂಡರೆ ಹೆಚ್ಚಿನ ಸಾಮಾನ್ಯ ಜ್ಞಾನ ಲಭಿಸುವುದರ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಹೆಚ್ಚಿನ ಉದ್ಯೋಗಾವಕಾಶಗಳಿಗೆ ಉತ್ತಮ ವೇದಿಕೆ ಸಿಗಲಿದೆ ಎಂದು ತಿಳಿಸಿದರು.
ಪಠ್ಯ ಓದುವುದರ ಜತೆಗೆ ದಿನಪತ್ರಿಕೆಗಳನ್ನು ಓದುವ ಮೂಲಕ ಪ್ರಸ್ತುತ ವಿದ್ಯಮಾನಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಭಾರತೀ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಸ್. ಮಹದೇವಸ್ವಾಮಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ನಾಗೇಶ್, ಗ್ರಂಥಪಾಲಕ ಎ.ಎಸ್.ಸಂಜೀವ್, ಸಹಾಯಕ ಪ್ರಾಧ್ಯಾಪಕರಾದ ಕೆ.ಗಾಯತ್ರಿ, ಚಿನ್ನಸ್ವಾಮಿ, ಶ್ರೀಕಾಂತ್, ಕಳ್ಳಿಮೆಳ್ಳೆದೊಡ್ಡಿ ಪ್ರಸನ್ನಕುಮಾರ್, ಡಾ.ಮರಯ್ಯ, ಭಾರತೀ, ಕಾವ್ಯಾ ಮತ್ತಿತರರಿದ್ದರು.