

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ದಿನೇ ದಿನೆ ಪ್ರಬಲವಾಗುತ್ತಿದ್ದು, ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನಪರ, ಬಡವರ ಕಲ್ಯಾಣಾಭಿವೃದ್ಧಿಗೆ ಶ್ರಮಿಸಲಿದೆ. ಇದರಲ್ಲಿ ಯಾವ ಅನುಮಾನಗಳು ಬೇಡ ಎಂದರು.
ಎರಡೂವರೆ ವರ್ಷದ ನಂತರ ಸಚಿವ ಸಂಪುಟ ಸಂಪೂರ್ಣ ಬದಲಾಗಲಿದೆ ಎಂಬ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಯಾವ ಅರ್ಥದಲ್ಲಿ ಈ ರೀತಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಸರ್ಕಾರ ಐದು ವರ್ಷ ಸುಭದ್ರವಾಗಿ ಇರಲಿದೆ ಎಂದು ತಿಳಿಸಿದರು.