ಟಾಟಾ ಏಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

More than 10 people injured in Tata Ace overturn
ಸಿಂದಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಗಾಯೊಂಡವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದು.
Published on

ಸಿಂದಗಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಲೋಯಲಾ ಶಾಲೆಯ ಹತ್ತಿರ ಗುರುವಾರ ನಸುಕಿನ ಜಾವ 4 ಗಂಟೆಗೆ ಟಾಟಾ ಏಸ್ ವಾಹನ ಪಲ್ಟಿಯಾಗಿ 10ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಸಂಭವಿಸಿದೆ.

ಹುನಗುಂದ ತಾಲೂಕಿನ ಬೇವಿನಾಳ ಗ್ರಾಮದಿಂದ ರಾಹೆ 50ರ ಮಾರ್ಗವಾಗಿ ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮದ ಭಾಗ್ಯವಂತಿ ದೇವಿ ದೇವಸ್ಥಾನಕ್ಕೆ ಜವಳ ಕಾರ್ಯಕ್ರಮಕ್ಕೆ ಹೊರಟಿದ್ದ ವೇಳೆ ಈ ಅಫಘಾತ ನಡೆದಿದೆ.

ವಾಹನದಲ್ಲಿದ್ದ 19 ಜನರಲ್ಲಿ 15 ಜನರು ಗಾಯಗೊಂಡಿದ್ದಾರೆ. ಲಕ್ಷ್ಮೀ ಶೇಗುಣಸಿ, ದ್ರಾಕ್ಷಾಯಿಣಿ ಹಿರೇಮಠ, ಅನುರಾಧಾ ಮೇಟಿ, ನೀಲವ್ವ ಮೇಟಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಇದ್ದಾರೆ. ಗಾಯಾಳುಗಳನ್ನು ವೈದ್ಯಕೀಯ ಉಪಚಾರಕ್ಕಾಗಿ ಸಿಂದಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net