ಮೆಕ್ಕೆಜೋಳ ತುಂಬಿದ ಚೀಲಗಳ ಕುಸಿತ, ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ 10ಕ್ಕೂ ಅಧಿಕ ಕಾರ್ಮಿಕರು !

ALIYABAD INDUSTRIES
ಅಲಿಯಾಬಾದ್ ಕೈಗಾರಿಕೆ ವಲಯದಲ್ಲಿರುವ ರಾಜಗುರು ಇಂಡಸ್ಟ್ರೀಜ್ ಗೋದಾಮಿನ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆದಿರುವುದು.
Published on

ವಿಜಯಪುರ: ಬೃಹತ್ ಗೋದಾಮಿನಲ್ಲಿ ಮೆಕ್ಕೆಜೋಳ ತುಂಬಿದ ಚೀಲಗಳು ಪಲ್ಟಿಯಾಗಿ 10ಕ್ಕೂ ಅಧಿಕ ಕಾರ್ಮಿಕರು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಇಲ್ಲಿನ ಇಂಡಿ ರಸ್ತೆಯಲ್ಲಿರುವ ಅಲಿಯಾಬಾದ್ ಕೈಗಾರಿಕೆ ವಲಯದಲ್ಲಿರುವ ರಾಜಗುರು ಇಂಡಸ್ಟ್ರೀಜ್ ಗೋದಾಮಿನ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಪಿಸಿಎಂಸಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ನಾಲ್ಕು ಜೆಸಿಬಿ ಸಹಾಯದಿಂದ ಚೀಲಗಳ ತೆರವು ಕಾರ್ಯಾಚರಣೆ ನಡೆದಿದ್ದು, ಕಾರ್ಮಿಕರ ಸ್ಥಿತಿ ಬಗ್ಗೆ ಇನ್ನೂ ಗೊತ್ತಾಗಿಲ್ಲ. ಕಾರ್ಮಿಕರು ಬಿಹಾರ ಮೂಲದವರೆನ್ನಲಾಗಿದ್ದು, ಕೆಲಸ ಮಾಡುವ ಸಂದರ್ಭ ಮೆಕ್ಕೆಜೋಳ ಚೀಲಗಳು ಕುಸಿದಿವೆ.

ಸ್ಥಳಕ್ಕೆ ಎಸ್‌ಪಿ ಋಷಿಕೇಷ ಸೋನಾವಣೆ ಭೇಟಿ ನೀಡಿದ್ದು ಕಾರ್ಯಾಚರಣೆ ಚುರುಕುಗೊಂಡಿದೆ. ಸತತ ಎರಡು ಗಂಟೆಗಳಿಂದ ಕಾರ್ಯಾಚರಣೆ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net