40ಕ್ಕೂ ಹೆಚ್ಚು ಜನರು ಕಾಂಗ್ರೆಸ್ ಸೇರ್ಪಡೆ

40ಕ್ಕೂ ಹೆಚ್ಚು ಜನರು ಕಾಂಗ್ರೆಸ್ ಸೇರ್ಪಡೆ
Published on

ಗೋಣಿಕೊಪ್ಪಲು: ಟಿ.ಶೆಟ್ಟಿಗೇರಿ ಗ್ರಾಮದ 40ಕ್ಕೂ ಅಧಿಕ ಇತರ ಪಕ್ಷದ ಕಾರ್ಯಕರ್ತರು ಶನಿವಾರ ಕಾಂಗ್ರೆಸ್ ಸೇರ್ಪಡೆಗೊಂಡರು.

ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಎಲ್ಲರನ್ನೂ ಶಾಲು ಹೊಂದಿಸಿ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವುದರೊಂದಿಗೆ ಎಲ್ಲರೂ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net