ನೆಲಕ್ಕುರುಳಿದ 40ಕ್ಕೂ ಹೆಚ್ಚು ವಿದ್ಯುತ್ ಕಂಬ

ನೆಲಕ್ಕುರುಳಿದ 40ಕ್ಕೂ ಹೆಚ್ಚು ವಿದ್ಯುತ್ ಕಂಬ
Published on

ಮಳವಳ್ಳಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ 40ಕ್ಕೂ ಹೆಚ್ಚಿನ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಅಂಗಡಿ ಮುಂಗಟ್ಟಿನ ಮುಂದೆ ಇರಿಸಿದ್ದ ನಾಮಫಲಕ, ಕೆಲವೆಡೆ ಛಾವಣಿಯ ಸೀಟ್ ಹಾರಿ ಹೋಗಿವೆ. ಬಿ.ಜಿ.ಪುರ ಗ್ರಾಮದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಉತ್ತೂರು ಗ್ರಾಮದಲ್ಲಿ ಮಳೆಗೆ ಬಾಳೆ ಬೆಳೆ ನೆಲಕ್ಕುರುಳಿದೆ.

ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬದಿ ಮಳವಳ್ಳಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯಾಗುವ ಕಂಬ ಮುರಿದು ಬಿದ್ದಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಳಕವಾಡಿ ಗ್ರಾಮದ ಪೂರಿಗಾಲಿ ಮುಖ್ಯರಸ್ತೆ ಬದಿ ಬೃಹತ್ ಮರವೊಂದು ರಸ್ತೆಗುರುಳಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನಾರಾಯಣಪುರ ಬಳಿ ನೀಲಗಿರಿ ಮರ ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net