ಸಾಗರ ತಾಲೂಕಿನಲ್ಲಿ 50ಕ್ಕೂ ಹೆಚ್ಚು ಡೆಂಘೆ ಕೇಸ್ ಪತ್ತೆ

7sgr1
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಸುಜಾತಾ, ಗೋಪಾಲಕೃಷ್ಣ ಟಿ.ನಾಯ್ಕ, ಚಂದ್ರಶೇಖರ್ ನಾಯ್ಕ ಇದ್ದರು.
Published on

ಸಾಗರ: ತಾಲೂಕಿನಲ್ಲಿ ಡೆಂಘೆ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದೆ ಎಂದು ಸಾಗರ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪರಪ್ಪ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ಇಂದು ಕೂಡ 7 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ 50ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದೆ. ಎಲ್ಲರೂ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ಭರತ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಡೆಂೆ ಪ್ರಕರಣಗಳು ಕಡಿಮೆ ಇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಮತ್ತೆ ಮಂಗನ ಕಾಯಿಲೆ ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು ಅದಕ್ಕೆ ಇಲಾಖೆ ಸೂಚಿಸಿರುವ ಎಲ್ಲಾ ಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದರು.
ಈಗಾಗಲೇ ಕೆಎ್ಡಿಗೆ ಸಂಬಂಧಪಟ್ಟಂತೆ ಆರ್‌ಟಿಪಿಸಿಆರ್ ಲ್ಯಾಬ್ ಸಾಗರದಲ್ಲಿ ಆರಂಭವಾಗಿದ್ದು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲು ಪುಣೆ ಅಥವಾ ಬೆಂಗಳೂರಿಗೆ ಕಳುಹಿಸಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಪತ್ರ ವ್ಯವಹಾರ ಮಾಡಲಾಗಿದೆ ಎಂದಿದ್ದಾರೆ. ಕೂಡಲೆ ಈ ಬಗ್ಗೆ ಕಾರ್ಯಪ್ರವತ್ತರಾಗಿ ಎಂದು ವೈದ್ಯಾಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net