

ಅಳವಂಡಿ: ಸಮೀಪದ ಬೆಳಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಕ್ರಮಿಕ ರೋಗಗಳ ನಿಯಂತ್ರಣ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಗದ್ದಿಕೇರಿ ಮಾತನಾಡಿ, ಮಲೇರಿಯಾ, ಡೆಂೆ ಜ್ವರ ಸೊಳ್ಳೆಗಳಿಂದ ಹರಡಲಿವೆ. ಕಾರಣ ಸೊಳ್ಳೆಗಳ ನಿಯಂತ್ರಣಕ್ಕೆ ಮನೆಯಲ್ಲಿ ಸಂಗ್ರಹಿಸಿದ ನೀರಿನ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ಮುನ್ನೆಚ್ಚರಿಕೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸಿ.
ಜ್ವರ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆಯಿರಿ ಎಂದರು. ಆರೋಗ್ಯ ನಿರೀಕ್ಷಣಾಧಿಕಾರಿ ಗವಿಸಿದ್ದಪ್ಪ, ಆರೋಗ್ಯ ಸುರಕ್ಷತಾಧಿಕಾರಿ ಸುಜಾತಾ, ಯಲ್ಲಮ್ಮ, ಶಿಕ್ಷಕರಾದ ಚಂದ್ರ ಗಿರಿಯಪ್ಪ ಬೆಳಗಿ. ಮಹಾಂತಮ್ಮ, ಸಿದ್ದಯ್ಯ ಇತರರಿದ್ದರು.