ಮನೆಯ ಸುತ್ತಲ ಪರಿಸರ ಶುಚಿ ಇಡಿ

dj khalli dengue
Published on

ಕೊಂಡ್ಲಹಳ್ಳಿ: ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಯ ಸುತ್ತಮುತ್ತಲ ಪರಿಸರದಲ್ಲಿ ಅಲ್ಲಲ್ಲಿ ನಿಂತ ನೀರಿನಿಂದ ಸೊಳ್ಳೆಗಳ ಸಂತತಿ ಹೆಚ್ಚಾಗುವುದನ್ನು ನಿಯಂತ್ರಿಸಿ, ರೋಗಗಳಿಂದ ದೂರ ಇರಬೇಕು ಎಂದು ವೈದ್ಯ ಬಿ.ನವೀನ್ ಕುಮಾರ್ ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿನ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡೆಂಘಿ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೊಳ್ಳೆಗಳು ಮನುಷ್ಯರನ್ನು ಕಚ್ಚುವುದರಿಂದ ಡೆಂಘಿ ಜ್ವರ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮುಂಜಾಗ್ರತಾ ಕ್ರಮವಾಗಿ ಮನೆಯ ಸುತ್ತಲ ಪ್ರದೇಶ, ನೀರಿನ ತೊಟ್ಟಿಗಳನ್ನು ಶುಚಿಯಾಗಿಡಬೇಕು ಎಂದರು.

ಮನೆಯ ಸುತ್ತಲ ಪ್ರದೇಶದಲ್ಲಿ ತುಳಸಿ, ಚೆಂಡು ಹೂವಿನ ಗಿಡಗಳನ್ನು ಬೆಳೆಸುವುದರಿಂದ ಸೊಳ್ಳೆಯನ್ನು ನಿಯಂತ್ರಿಸಬಹುದು.

ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆಗಳು ಕಚ್ಚದಂತೆ ಜಾಗ್ರತೆ ವಹಿಸಿದರೆ ರೋಗಗಳಿಂದ ದೂರ ಇರಬಹುದು ಎಂದು ತಿಳಿಸಿದರು.

ಡಾ.ನವೀನ್ ಮಾತನಾಡಿ, ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಕಾಣಿಸಿಕೊಂಡರೆ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಮುಖ್ಯಶಿಕ್ಷಕ ತಿಪ್ಪೇಸ್ವಾಮಿ, ಕೆ.ರಾಧಾ, ವಿನಯ, ಡಿ.ಜಿ.ರವೀಂದ್ರರೆಡ್ಡಿ, ಎಸ್.ಶಂಕರಪ್ಪ, ಎಂ.ವಿ.ನಾಗೇಶ್, ಸೌಮ್ಯಶ್ರೀ, ಚನ್ನವೀರಮ್ಮ, ಪುಟ್ಟಮ್ಮ, ಸಾವಿತ್ರಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net