ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಬೈಕ್ ಸವಾರ ಸಾವು

Bike Accident
Published on

ಬ್ಯಾಡಗಿ: ನಿಂತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಮೋಟೆಬೆನ್ನೂರ ಬಳಿ ಗುರುವಾರ ಸಂಭವಿಸಿದೆ.
ಹಾವೇರಿ ತಾಲೂಕಿನ ನೆಲೋಗಲ್ಲ ಗ್ರಾಮದ ಲೋಕೇಶ ಚನ್ನಪ್ಪ ಲಮಾಣಿ (43) ಮೃತ ಬೈಕ್ ಸವಾರ.
ಇವರು ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಸಮಯದಲ್ಲಿ ಟಿಪ್ಪರ್ ವಾಹನದ ಚಾಲಕ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಲೋಕೇಶ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net