ಬಸ್‌-ಸ್ಕೂಟಿ ಡಿಕ್ಕಿ ತಾಯಿ ಮಗಳು ದಾರುಣ ಸಾವು

bus-scooter-accident
Published on

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ, ಮಗಳು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಸವಿತಾ ಆಚಾರಿ(40) ಹಾಗೂ ಮಗಳು ಅಂಕಿತಾ (17) ಮೃತರು.
ಮಂಗಳೂರು-ಕಾರವಾರ-ಬೆಳಗಾವಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಬಸ್‌ನಡಿ ಸ್ಕೂಟಿ ಸವಾರರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ತಪ್ಪಿಸಲು ಹೋಗಿ ಬಸ್‌ ಕೂಡ ಡಿವೈಡರ್‌ ಹತ್ತಿ ನಿಂತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್‌ ಸವಾರ ಸಾವು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net