ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿ ಆಶೀರ್ವಾದ ಇದೆ

prathap simha
Published on

ಮೈಸೂರು: ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿ ಆಶೀರ್ವಾದ ಇದೆ. ನಾನು ಈ ಹತ್ತು ವರ್ಷದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹಾಗಾಗಿ ಪಕ್ಷ ನನ್ನ ಕೈ ಬಿಡಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸೋಲಿನ ಟಿಕೆಟ್‌ಗಾಗಿಯೇ ಹೊಡೆದಾಟವಿದೆ. ಹೀಗಿರುವಾಗ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದರೆ ಏರಲು ಎಲ್ಲರೂ ಪ್ರಯತ್ನ ಪಡುತ್ತಾ ಇರುತ್ತಾರೆ. ಚುನಾವಣೆ ಅಂದರೆ ಆಕಾಂಕ್ಷಿಗಳು ಇದ್ದೆ ಇರುತ್ತಾರೆ. ಪ್ರಧಾನಿ ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ. ಹಾಗಾಗಿ ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನಿಸುತ್ತಾರೆ.

ಚುನಾವಣೆ ಎಂದಮೇಲೆ ಪಕ್ಷದಲ್ಲಿ ಸಾಕಷ್ಟು ಆಕಾಂಕ್ಷಿಗಳಿರುತ್ತಾರೆ. 2013ರಲ್ಲಿ ನಾನು ಒಬ್ಬ ಪತ್ರಕರ್ತನಾಗಿದ್ದೆ. ಮೈಸೂರು ಚುನಾವಣೆ ಬಗ್ಗೆ ಯೋಚನೆ ಮಾಡುವ ಸ್ಥಿತಿಯಲ್ಲೂ ಇರಲಿಲ್ಲ. ಅಂತಹ ಸಂದರ್ಭದಲ್ಲಿ ಸಂಘದ ಆಶೀರ್ವಾದ, ಪಕ್ಷದ ಬಲದಿಂದ ಗೆದ್ದಿದ್ದೆ. ಚುನಾವಣೆ ಅಂದರೆ ಆಕಾಂಕ್ಷಿಗಳು ಇದ್ದೆ ಇರುತ್ತಾರೆ. ಅಂತಿಮವಾಗಿ ಪಕ್ಷದ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷರು ಹಾಗೂ ನಮ್ಮ ಹೈಕಮಾಂಡ್ ಎಲ್ಲವನೂ ತೀರ್ಮಾನಿಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net