ಮದುವೆ ದಿಬ್ಬಣದ ಇನ್ನೋವಾ ಕಾರು ಪಲ್ಟಿಯಾಗಿ ತಾಯಿ, ಮಗು ಮೃತ್ಯು

car accident
Published on

ಸುಳ್ಯ: ಜಾಲ್ಸೂರು-ಕಾಸರಗೋಡು ರಸ್ತೆಯ ಪರಪ್ಪೆ ಎಂಬಲ್ಲಿ ಸೋಮವಾರ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಇನ್ನೋವಾ ಕಾರು ಸ್ಕಿಡ್ ಆಗಿ ಪಲ್ಟಿಯಾಗಿ ಮರಕ್ಕೆ ಗುದ್ದಿದ ಪರಿಣಾಮ ತಾಯಿ, ಮಗು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬುವರ ಪುತ್ರಿ, ಪರಪ್ಪೆಯ ಶಾನ್ ಎಂಬುವರ ಪತ್ನಿ ಶಾಹಿನಾ(28) ಹಾಗೂ ಅವರ 3 ವರ್ಷದ ಮಗು ಶಜಾ ಮೃತರು.

ಕಾರಿನಲ್ಲಿದ್ದ ನಾಲ್ವರು ತೀವ್ರ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ತರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net