ಒಂದು ವರ್ಷದ ಮಗಳನ್ನು ಕಳೆದುಕೊಂಡ ದುಃಖ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ತಾಯಿ

1 Mother Jan 1
Published on

ದಾವಣಗೆರೆ: ತನ್ನ ಒಂದು ವರ್ಷದ ಮಗಳು ಅನಾರೋಗ್ಯದಿಂದ ಮೃತಪಟ್ಟ ನೋವನ್ನು ಭರಿಸಲಾಗದ ತಾಯಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂಥದ್ದೊಂದು ಮನಕಲಕುವ ಘಟನೆ ನಡೆದಿದ್ದು ಹರಿಹರ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ.

ಮಗು ವಂದನಾ ಮೂರು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿತ್ತು. ಅಂದಿನಿಂದಲೂ ತುಂಬ ದುಃಖದಿಂದ ಇದ್ದ ಅವಳ ತಾಯಿ ಜ್ಯೋತಿ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net