

ವಿಜಯಪುರ: ತಾಯಿಯೊಬ್ಬಳು ತನ್ನ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ, ಬಳಿಕ ಅದೇ ಹೊಂಡಕ್ಕೆ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ತಿಕೋಟಾ ತಾಲೂಕಿನ ತೊರವಿ ತಾಂಡಾ-1ರ ತೋಟದಲ್ಲಿ ಈ ಪ್ರಕರಣ ನಡೆದಿದೆ.
ಅನಿತಾ ಪಿಂಟು ಜಾಧವ್ (27) ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪ್ರವೀಣ (6), ಸುದೀಪ (4), ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ ಹೊಂಡದಲ್ಲಿ ಎಸೆದು ನಂತರ ತಾನೂ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಾಲ್ಕು ಜನರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.