

ಅಳವಂಡಿ: ಮಗು ಜನಿಸಿದ ತಾಸಿನೊಳಗೆ ತಾಯಿ ಹಾಲು ನೀಡಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಹೇಳಿದರು.
ಸಮೀಪದ ಕಾತರಕಿಯಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ತಾಯಿಹಾಲು ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಎಂದರು.
ಇದನ್ನೂ ಓದಿ: ತಾಯಿ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
ನಂತರ ವಿಶ್ವ ಸ್ತನ್ಯಪಾನದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ವೈದ್ಯಾಧಿಕಾರಿ ಕಾವ್ಯಾ, ರವೀಂದ್ರ, ಆರೋಗ್ಯ ನೀರಿಕ್ಷಣಾಧಿಕಾರಿ ಕೃಷ್ಣ ರಾಠೋಡ, ಆರೋಗ್ಯ ಸುರಕ್ಷತಾಧಿಕಾರಿ ಜ್ಯೋತಿ, ಸಮುದಾಯ ಆರೋಗ್ಯ ಅಧಿಕಾರಿ ಮರದಾನಬೀ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.