ಅತ್ತೆಯ ಕೊಲೆ ಆರೋಪ ಎದುರಿಸುತ್ತಿದ್ದ ಸೊಸೆ ಆತ್ಮಹತ್ಯೆ

lady Suside+1
Published on

ಶಿಗ್ಗಾಂವಿ: ಅತ್ತಿಗೆಯ ಕೊಲೆ ಆರೋಪ ಎದುರಿಸುತ್ತಿದ್ದ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಂಕಣವಾಡ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದ ಮಂಜುಳಾ ಬಸವರಾಜ ಹರಿಜನ (34) ಮೃತ ಮಹಿಳೆ.
ಇವಳ ಮೇಲೆ ಅತ್ತೆಯನ್ನು ಕೊಲೆ ಮಾಡಿದ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಕೆಯನ್ನು ಬಂಧಿಸಿದ್ದರು. ನಂತರ ಜಾಮೀನು ಪಡೆದು ಹೊರಗೆ ಬಂದ ಈಕೆ ಪತಿಯ ಮನೆ ಬಿಟ್ಟು ತವರು ಮನೆಯಾದ ಕಂಕಣವಾಡಕ್ಕೆ ಬಂದು ಉಳಿದುಕೊಂಡಿದ್ದಳು. ಆದರೆ, ತನ್ನ ಮೇಲೆ ಕೊಲೆ ಆರೋಪ ಪ್ರಕರಣ ದಾಖಲಾಗಿದೆ ಎನ್ನುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net