

ವಿಜಯವಾಣಿ ಸುದ್ದಿಜಾಲ ಹೆಬ್ರಿ
ತಮ್ಮ ಬಾಲ್ಯದ ದಿನಗಳು ಬಹಳ ಕಷ್ಟದಾಯಕವಾಗಿದ್ದವು. ಆ ಕಷ್ಟಗಳೇ ಇಂದು ನನಗೆ ಏನನ್ನಾದರೂ ಸಾಧಿಸುವ ಪ್ರೇರಣೆ ನೀಡಿತು. ವಿದ್ಯಾರ್ಥಿ ಜೀವನದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಶಿಕ್ಷಣ ಮುಗಿಯುವವರೆಗಿನ ಸುಮಾರು ಹದಿನೈದು ಹದಿನಾರು ವರ್ಷ ಕಷ್ಟಪಟ್ಟರೆ ದೀರ್ಘಕಾಲದ ಜೀವನದಲ್ಲಿ ಸುಖ ಹಾಗೂ ಸಂತೋಷದಿಂದ ಬಾಳಬಹುದು ಎಂದು ತತ್ವಂ ಸಾಫ್ಟ್‌ವೇರ್ ಸ್ಥಾಪಕರ ವಿನಾಯಕ ಶೆಣೈ ಹೇಳಿದರು.
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಮೌಲ್ಯಮಾಪನ ಮಾಡುವ ಉದ್ದೇಶದಿಂದ ಅಮೃತ ಇ ಟೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಕಾಲಘಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಬಹಳ ಮುಖ್ಯ. ಅದನ್ನು ಮನಗಂಡು ಈ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿದ್ದು, ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು ಎಂದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಅಮರೇಶ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಸತೀಶ್ ಪೈ, ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕ ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳು ಉನ್ನತ ಸಾಧನೆಗಾಗಿ ನಮ್ಮನ್ನ ನಂಬಿ ಈ ಸಂಸ್ಥೆಗೆ ಬಂದಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವುದಕ್ಕೆ ಆಡಳಿತ ಮಂಡಳಿ ಸದಾ ಸಿದ್ಧವಾಗಿರುತ್ತದೆ. ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧನೆಯನ್ನ ಮಾಡಬೇಕು. -ರಾಜೇಶ್ ನಾಯಕ್ , ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ
-ರಾಜೇಶ್ ನಾಯಕ್ , ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ